Asianet Suvarna News Asianet Suvarna News

ಟೀಂ ಇಂಡಿಯಾ ಸೋಲುತ್ತಿದ್ದಂತೆ ಟಿವಿ ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಅಭಿಮಾನಿಗಳು

ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ಭಾರತ ಪಾಕ್ ವಿರುದ್ದ ಸೋತಿದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು, ಟಿವಿ ಧ್ವಂಸ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

Fans Of Team India Demolished The TV
  • Facebook
  • Twitter
  • Whatsapp

ಕೊಪ್ಪಳ(ಜೂ.19): ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ಭಾರತ ಪಾಕ್ ವಿರುದ್ದ ಸೋತಿದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು, ಟಿವಿ ಧ್ವಂಸ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಜಿಲ್ಲೆಯ ಗಂಗಾವತಿ ತಾಲೂಕಿನ ವಿರಾಪುರ ಗ್ರಾಮದಲ್ಲಿ  ಈ ಘಟನೆ ನಡೆದಿದೆ. ಇನ್ನು ವೀರಾಪುರದ ಡಾಬಾವೊಂದರಲ್ಲಿ ಅಭಿಮಾನಿಗಳು ಪಂದ್ಯ ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ಭಾರತ ಸೋಲುತ್ತಿದ್ದಂತೆ ರೊಚ್ಚಿಗೆದ್ದ ಅಭಿಮಾನಿಗಳು  ಟಿವಿಯನ್ನ ಒಡೆದು ಹಾಕಿದ್ದಾರೆ.

ಇದರ ಜೊತೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿರುದ್ದ ದಿಕ್ಕಾರ ಕೂಗಿ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Follow Us:
Download App:
  • android
  • ios