Asianet Suvarna News Asianet Suvarna News

ಸಾಲ ಮನ್ನಾ ಆದರೆ ಹಲವು ಅನುದಾನ ಕಟ್‌

ತರ ಸಂಪೂರ್ಣ ಸಾಲಮನ್ನಾ ಮಾಡಿದರೆ ಹಲವು ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಕಾಗುತ್ತದೆ. ಇದರಿಂ ಆರ್ಥಿಕ ಪರಿಸ್ಥಿತಿ ಸರಿದೂಗಿಸಿಕೊಂಡು ಹೋಗಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. 

farm loan waiver Is Bad impact Over Development Says Krishna Byregowda

ಬೆಂಗಳೂರು :  ರೈತರ ಸಂಪೂರ್ಣ ಸಾಲಮನ್ನಾ ಮಾಡಿದರೆ ಹಲವು ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಕಾಗುತ್ತದೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಸಂಪೂರ್ಣ ಸಾಲ ಮನ್ನಾದಿಂದ ಹಲವು ಕಾರ್ಯಕ್ರಮಗಳಿಗೆ ಅನುದಾನ ಕಡಿಮೆ ಆಗುತ್ತದೆ, ರಾತ್ರೋರಾತ್ರಿ ಕಾರ್ಯಕ್ರಮ ಬದಲಾವಣೆ ಮಾಡಲು ಆಗುವುದಿಲ್ಲ. ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕಷ್ಟವಾಗಲಿದೆ ಎಂದು ಹೇಳಿದರು.

ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ವಾಮಮಾರ್ಗ ಅನುಸರಿಸುವುದು ಸರಿಯಾದ ಕ್ರಮವಲ್ಲ. ಒಂದು ವೇಳೆ ಹಾಗೇನಾದರೂ ಮಾಡಿದರೆ ರಾಜ್ಯದ ಜನತೆಯ ಶಾಪ ತಟ್ಟಲಿದೆ. ಬಿಜೆಪಿ ದೇಶದ ಹಲವು ರಾಜ್ಯಗಳಲ್ಲಿ ನಾನಾ ಮಾರ್ಗಗಳನ್ನು ಬಳಸಿ ಸರ್ಕಾರ ಅಭದ್ರಗೊಳಿಸುವ ಕೆಲಸ ಮಾಡಿಕೊಂಡು ಬಂದಿದೆ. ರಾಜ್ಯದಲ್ಲಿಯೂ ಅದೇ ಕೆಲಸ ಮಾಡುವ ಯೋಜನೆ ರೂಪಿಸಿದ್ದರು. ಆದರೆ, ಅದರಲ್ಲಿ ಯಶಸ್ಸು ಕಾಣಲಿಲ್ಲ. ಬಿಜೆಪಿಯವರು ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕು ಎಂದರು.

ಮಾಜಿ ಸಚಿವ ಎಂ.ಬಿ.ಪಾಟೀಲ್‌ ನಮ್ಮ ಪಕ್ಷದ ನಾಯಕರಾಗಿದ್ದು, ಒಂದೇ ಪಕ್ಷದ ಇಬ್ಬರು ಭೇಟಿ ಮಾಡುವುದು ಸಹಜ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಿದ್ದೆ. ಈ ವೇಳೆ ಎಂ.ಬಿ.ಪಾಟೀಲ್‌ ಸಹ ದೆಹಲಿಗೆ ಆಗಮಿಸಿದ್ದರು. ಸಹಜವಾಗಿ ಭೇಟಿಯಾಗಿದ್ದೆವು. ಎಂ.ಬಿ.ಪಾಟೀಲ್‌ ಮತ್ತು ಕೆಲವರು ಸಂಪುಟ ವಿಸ್ತರಣೆಯಾಗಬೇಕು ಎಂಬುದಾಗಿ ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.

Follow Us:
Download App:
  • android
  • ios