ನವದೆಹಲಿ :  ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಗಳಲ್ಲಿ ಕಾಂಗ್ರೆಸ್ಸಿನ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಸ್ಟಂಟ್ ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್ಸಿನ ಈ ದಾರಿ ತಪ್ಪಿಸುವ ಘೋಷಣೆ ಗಳಿಂದ ಬಹುತೇಕ ರೈತರಿಗೆ ಅನುಕೂಲ ವಾಗುವುದಿಲ್ಲ. ಏಕೆಂದರೆ, ಬ್ಯಾಂಕುಗ ಳಿಂದ ಸಾಲ ಪಡೆಯುವ ರೈತರು ಅಲ್ಪ ಮಂದಿ ಮಾತ್ರ ಎಂದೂ ಅವರು ಹೇಳಿದ್ದಾರೆ.

ಈ ಹಿಂದೆಯೂ ಕೂಡ ಅನೇಕ ಬಾರಿ ಕರ್ನಾಟಕ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲ. ಕೇವಲ 800 ರೈತರ ಸಾಲಮನ್ನಾ ಮಾಡಿದೆ ಎಂದು ಹೇಳಿದ್ದರು. 

ಈ ಬಗ್ಗೆ ಜೆಡಿಎಸ್ ಮುಖಂಡರು ಪ್ರತಿಕ್ರಿಯಿಸಿ ರಾಜ್ಯದಲ್ಲಿ 60 ಸಾವಿರ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಪ್ರಧಾನಿ ಮೋದಿಗೆ ತಿರುಗೇಟಿ ನೀಡಿದ್ದಾರೆ.