ಇದು ರೈತರಿಗೆ ಸಿಗುತ್ತಿರುವ ಗುಡ್ ನ್ಯೂಸ್

Farmer Centric Sonalika investing in new innovation Center
Highlights

ರೈತರನ್ನೇ ಪ್ರಮುಖವಾಗಿ ಕೇಂದ್ರೀಕರಿಸಿಕೊಂಡಿರುವ ಟ್ರ್ಯಾಕ್ಟರ್ ಕಂಪನಿ ಸೊನಾಲಿಕಾ ಇಂಟರ್‌ನ್ಯಾಷನಲ್ ಟ್ರ್ಯಾಕ್ಟರ್ಸ್‌ ಲಿಮಿಟೆಡ್ ಸುಮಾರು 200 ಕೋಟಿ ರುಪಾಯಿ ವೆಚ್ಚದಲ್ಲಿ ದೆಹಲಿಯಲ್ಲಿ ಹೊಸ ಸಂಶೋಧನಾ ಕೇಂದ್ರ ಅಭಿವೃದ್ಧಿ ಪಡಿಸಿದೆ. ಇದಕ್ಕಾಗಿ ಸುಮಾರು 200 ಕೋಟಿ ರು. ಬಂಡವಾಳ ಹೂಡಲು ನಿರ್ಧರಿಸಿದೆ. 

ನವದೆಹಲಿ :  ರೈತರನ್ನೇ ಪ್ರಮುಖವಾಗಿ ಕೇಂದ್ರೀಕರಿಸಿಕೊಂಡಿರುವ ಟ್ರ್ಯಾಕ್ಟರ್ ಕಂಪನಿ ಸೊನಾಲಿಕಾ ಇಂಟರ್‌ನ್ಯಾಷನಲ್ ಟ್ರ್ಯಾಕ್ಟರ್ಸ್‌ ಲಿಮಿಟೆಡ್ ಸುಮಾರು 200 ಕೋಟಿ ರುಪಾಯಿ ವೆಚ್ಚದಲ್ಲಿ ದೆಹಲಿಯಲ್ಲಿ ಹೊಸ ಸಂಶೋಧನಾ ಕೇಂದ್ರ ಅಭಿವೃದ್ಧಿ ಪಡಿಸಿದೆ. ಇದಕ್ಕಾಗಿ ಸುಮಾರು 200 ಕೋಟಿ ರು. ಬಂಡವಾಳ ಹೂಡಲು ನಿರ್ಧರಿಸಿದೆ. 

ಈ ಸಂಶೋಧನಾ ಕೇಂದ್ರದಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಟ್ರ್ಯಾಕ್ಟರ್ ತಯಾರಿಕೆ ಮೇಲ್ದರ್ಜೆಗೇರಿಸುವ ಕ್ರಮ, ಮಾಲಿನ್ಯ ನಿಯಂತ್ರಣ ಮಾರ್ಗಸೂಚಿ, ಉತ್ಪಾದನ ಅಭಿವೃದ್ಧಿ ವೆಚ್ಚ ಕಡಿಮೆ ಮಾಡಲು ಅಗತ್ಯವಾದ ಸಂಶೋಧನೆಗಳು ನಡೆಯಲಿವೆ. 

ಇದರಲ್ಲಿ ಹೊಸ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಮೇಲ್ದರ್ಜೆಗೆ 250 ಕೋಟಿ ರು. ಹೂಡಿಕೆ ಮಾಡಲು ಕಂಪೆನಿ ನಿರ್ಧರಿಸಿದೆ. ಈ ಮೂಲಕ ರೈತರಿಗೆ ಪೂರೈಕೆ ಮಾಡಲಾಗುತ್ತಿರುವ ಟ್ರ್ಯಾಕ್ಟರ್ ಮತು  ಇತರೆ ಉತ್ಪನ್ನಗಳ ಗುಣಮಟ್ಟವನ್ನು ಅತ್ಯುತ್ಕೃಷ್ಠಗೊಳಿಸುವ ನಿಟ್ಟಿನಲ್ಲಿ ಈ ಕೇಂದ್ರ ಕೆಲಸ ಮಾಡಲಿದೆ.

ಸೊನಾಲಿಕಾ ಸಂಸ್ಥೆ ಈ ಆರ್ಥಿಕ ಸಾಲಿನಲ್ಲಿ ಒಂದು ಲಕ್ಷ ಟ್ರ್ಯಾಕ್ಟರ್‌ಗಳನ್ನು ತಯಾರಿಸಿ ಮಾರಾಟ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ ಪ್ರತಿ ವರ್ಷ 2 ಲಕ್ಷ ಟ್ರ್ಯಾಕ್ಟರ್‌ಗಳನ್ನು ತಯಾರಿಸುವ ಮಾರಾಟ ಮಾಡುವ ಗುರಿ ಹಾಕಿಕೊಂಡಿದೆ. ಇದಕ್ಕೆ ಪೂರಕವಾಗಿ ಸಂಶೋಧನಾ ಕೇಂದ್ರ ತೆರೆಯಲಾಗಿದೆ.

loader