ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ನಾಗಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ

ಬೆಂಗಳೂರು(ಅ.16): ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ನಾಗಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.

Add Asianetnews Kannada as a Preferred SourcegooglePreferred

ಈರಪ್ಪ ಗುರಪ್ಪ ಅಂಗಡಿ(57) ಆತ್ಮಹತ್ಯೆ ಮಾಡಿಕೊಂಡ ರೈತ. ಭಾನುವಾರ ತಮ್ಮ ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಶರ್ಟ್ ಜೇಬಿನಲ್ಲಿ ಪ್ರಧಾನಮಂತ್ರಿಗಳ ಹೆಸರು, ಕಚೇರಿ ವಿಳಾಸಕ್ಕೆ ಬರೆದಿರುವ ಪತ್ರ ದೊರೆತಿದ್ದು, ಅದನ್ನು ಪ್ರಧಾನಿಗಳಿಗೆ ಕಳುಹಿಸಿರುವ ಬಗ್ಗೆ ನಿಖರ ಮಾಹಿತಿ ದೊರೆತಿಲ್ಲ.

ಪತ್ರದಲ್ಲೇನಿದೆ?:

‘ನಾನು 2015ರ ಡಿ.೫ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ನನ್ನ ಸಾಲದ ಮೇಲಿನ ಬಡ್ಡಿಯನ್ನಾದರೂ ಮನ್ನಾ ಮಾಡಿಸಿ ಎಂದು ಕೋರಿದ್ದೆ. ಜಿಲ್ಲಾಧಿಕಾರಿ, ಬ್ಯಾಂಕ್ ಮ್ಯಾನೇಜರ್ ಅವರಿಗೂ ಪತ್ರ ಬರೆದಿದ್ದೆ. ಆದರೆ, ಎಲ್ಲ ಕಚೇರಿ ಗಳಲ್ಲೂ ತಿರುಗಾಡಿಸಿ ಬಳಿಕ ಬಡ್ಡಿಮನ್ನಾ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನನ್ನ ಜಮೀನಿನ ಉತಾರದ ಮೇಲೂ ಬ್ಯಾಂಕ್ ಸಾಲದ ಬೋಜಾ ಕೂಡಿಸಲಾಗಿದೆ. ಈ ಬಗ್ಗೆ ಪರಿಶೀಲಿಸಿ ದಯವಿಟ್ಟು ನ್ಯಾಯ ಒದಗಿಸಿಕೊಡಬೇಕು ಎಂದು ರೈತ ಪತ್ರದಲ್ಲಿ ತಿಳಿಸಿದ್ದಾನೆ.

ಮತ್ತೊಬ್ಬ ರೈತ ಆತ್ಮಹತ್ಯೆ:

ಕಲಬುರಗಿ ಜಿಲ್ಲೆಯ ಪಾಣೆಗಾಂವ್ ಗ್ರಾಮದಲ್ಲಿ ಭಾನುವಾರ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರೇವಣಸಿದ್ದಪ್ಪ(37) ಮೃತ ರೈತ. ಇವರು 6 ಲಕ್ಷ ಸಾಲ ಮಾಡಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾಲದ ಶೂಲಕ್ಕೆ ಬಲಿಯಾದ ರೈತರ ಸಂಖ್ಯೆ 464ಕ್ಕೆ ಏರಿದ್ದು, ರಾಜ್ಯಸರ್ಕಾರ ಸಾಲಮನ್ನಾ ಮಾಡಿದ ಬಳಿಕ 157 ಮಂದಿ ಜೀವಕಳೆದುಕೊಂಡಿದ್ದಾರೆ.