ರೈತರಿಗೆ ಮತ್ತೊಂದು ಬಂಪರ್ ಕೊಡುಗೆ ನೀಡಲಾಗುತ್ತಿದೆ. ರೈತರ 30 ಸಾವಿರ ಕೋಟಿ ಸಾಲ ಮನ್ನಾ ಮಾಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದಾರೆ. 

ನವದೆಹಲಿ : ಪಂಚರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಜಯಗಳಿಸಿ ಸರ್ಕಾರ ರಚಿಸುತ್ತಿರುವ ಕಾಂಗ್ರೆಸ್ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೂರು ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಶೀಘ್ರದಲ್ಲೇ ನೀಡಿದ ಆಶ್ವಾಸನೆಯಂತೆ ಸಾಲ ಮನ್ನಾ ಆಗಲಿದೆ ಎಂದಿದ್ದಾರೆ. 

ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸಾಲಮನ್ನಾ ಮಾಡುವ ಭರವಸೆ ನೀಡಿತ್ತು. ಚುನಾವಣಾ ರ್ಯಾಲಿಯಲ್ಲಿಯೂ ಸಹ ಈ ಬಗ್ಗೆ ರಾಹುಲ್ ಗಾಂಧಿ ಮತದಾರರಿಗೆ ಆಶ್ವಾಸನೆ ನೀಡಿದ್ದರು. 

ಅದರಂತೆ ಇದೀಗ ಮೂರು ರಾಜ್ಯಗಳ ರೈತರ 30 ಸಾವಿರ ಕೋಟಿ ಸಾಲ ಮನ್ನಾ ಆಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಕರ್ನಾಟಕದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದು, ಇಲ್ಲಿಯೂ ಕೂಡ ರೈತರ ಸಾಲಮನ್ನಾ ಆಗಿದ್ದು, ಇದೀಗ ಇನ್ನೂ ಮೂರು ರಾಜ್ಯಗಳಲ್ಲಿ ಸಾಲ ಮನ್ನಾ ಮಾಡಲಾಗುತ್ತಿದೆ.