ಬೆಳಗಾವಿ [ಆ.10]: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿದೆ. ಇದಕ್ಕೆ ಕಾರಣರಾದವರು ಅತೃಪ್ತರಾಗಿ ರಾಜೀನಾಮೆ ನೀಡಿ ತೆರಳಿದವರು ಎಂದು ಕೈ ನಾಯಕರು ಆಕ್ರೋಶ ವ್ಯಕ್ತಡಪಿಸಿದ್ದಾರೆ. 

ಬೆಳಗಾವಿಯ ಅಥಣಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಹೇಶ್ ಕುಮಟಳ್ಳಿ ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದರು. ಇದಕ್ಕೆ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್  ಸೂಕ್ತವಾದ ನ್ಯಾಯಸಮ್ಮತ ತೀರ್ಮಾನವನ್ನೇ ತೆಗೆದುಕೊಂಡರು ಎಂದರು.

ಇನ್ನು ಈ ವಿಚಾರ ಜನತಾ ನ್ಯಾಯಾಲಯದಲ್ಲಿದ್ದು, ಅಲ್ಲಿಯೂ ಕೂಡ ಇದೇ ರೀತಿ ತೀರ್ಪು ಕೂಡ ಬರಲಿದೆ ಎಂದು ಗದಗ ಕ್ಷೇತ್ರದ ಶಾಸಕರಾದ ಎಚ್.ಕೆ.ಪಾಟೀಲ್ ಹೇಳಿದರು. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಮಹೇಶ್ ಕುಮಟಳ್ಳಿ ರಾಜೀನಾಮೆಯಿಂದ ತೆರವಾದ ಅಥಣಿ ಕ್ಷೇತ್ರಕ್ಕೆ ಶೀಘ್ರವೇ ಉಪ ಚುನಾವಣೆ ನಡೆಯಲಿದ್ದು, ಇಲ್ಲಿಗೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುತ್ತವೇ ಎಂದರು. ಇನ್ನು ಕುಮಟಳ್ಳಿ ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ನಾನು ಇದುವರೆಗೂ ಅವರನ್ನು ಭೇಟಿ ಮಾಡಿಲ್ಲವೆಂದು ಸ್ಪಷ್ಟನೆ ನೀಡಿದರು.