ಯಶವಂತಪುರ ಮಾರುಕಟ್ಟೆಯನ್ನು ದಾಸನಪುರ ಮಾರುಕಟ್ಟೆಗೆ ಸ್ಥಳಾಂತರಿಸಿರುವ ಎಪಿಎಂಪಿ ಕ್ರಮ ಖಂಡಿಸಿ, ರೈತರು, ವರ್ತಕರು ಯಶವಂತಪುರದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ದಾಸನಪುರ ಮಾರುಕಟ್ಟೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲ.  ಹೀಗಾಗಿ ನಾವು ಅಲ್ಲಿಗೆ ಹೋಗಲ್ಲ . ಎರಡು ಮಾರುಕಟ್ಟೆಯಲ್ಲಿ ಈರುಳ್ಳಿ, ಆಲೂಗಡ್ಡೆ  ಮಾರಾಟವಾಗದೇ ರೈತರು ಕಂಗಾಲಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬೆಂಗಳೂರು: ಯಶವಂತಪುರ ಮಾರುಕಟ್ಟೆಯನ್ನು ದಾಸನಪುರ ಮಾರುಕಟ್ಟೆಗೆ ಸ್ಥಳಾಂತರಿಸಿರುವ ಎಪಿಎಂಪಿ ಕ್ರಮ ಖಂಡಿಸಿ, ರೈತರು, ವರ್ತಕರು ಯಶವಂತಪುರದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಾಸನಪುರ ಮಾರುಕಟ್ಟೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲ. ಹೀಗಾಗಿ ನಾವು ಅಲ್ಲಿಗೆ ಹೋಗಲ್ಲ . ಎರಡು ಮಾರುಕಟ್ಟೆಯಲ್ಲಿ ಈರುಳ್ಳಿ, ಆಲೂಗಡ್ಡೆ ಮಾರಾಟವಾಗದೇ ರೈತರು ಕಂಗಾಲಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದಾಸನಪುರ ಮಾರುಕಟ್ಟೆಯಲ್ಲಿಯೂ ಈರುಳ್ಳಿ, ಆಲೂಗಡ್ಡೆ ಖರೀದಿಸುವುದಾಗಿ ಎಪಿಎಂಸಿ ಅಧಿಕಾರಿಗಳು ಹೇಳಿದರೂ, ಪ್ರತಿಭಟನಾಕಾರರು ಮಾತ್ರ ಜಗ್ಗಲಿಲ್ಲ. ನಂತರ ಸ್ಥಳಕ್ಕೆ ಆಗಮಿಸಿದ ಶಾಸಕ ಗೋಪಾಲಯ್ಯ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಸ್ಥಳಕ್ಕೆ ಪ್ರತಿಭಟನಾಕಾರರ ಜತೆ ಸಮಾಲೋಚನೆ ನಡೆಸಿದರು.

ನಂತರ ಶಾಸಕ ಗೋಪಾಲಯ್ಯ 2 ಗಂಟೆಯೊಳಗೆ ಸಮಸ್ಯೆ ಬಗೆಹರಿಸಲು ಗಡುವು ನೀಡಿದರು. ಇಲ್ಲದೇ ಇದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಲು ರೈತರು ಸಿದ್ಧತೆ ನಡೆಸಿದ್ದಾರೆ.