ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಿ ಸಾಲ ಮನ್ನಾ ಮಾಡಿಸುವಲ್ಲಿ ಯಶಸ್ವಿಯಾಗಿರುವ ರೈತರು ಈಗ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡ ಬೇಕೆಂದು ಸದ್ಯದಲ್ಲೇ ಹೋರಾಟ ರೂಪಿಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಿ ಸಾಲ ಮನ್ನಾ ಮಾಡಿಸುವಲ್ಲಿ ಯಶಸ್ವಿಯಾಗಿರುವ ರೈತರು ಈಗ ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.
ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡ ಬೇಕೆಂದು ಸದ್ಯದಲ್ಲೇ ಹೋರಾಟ ರೂಪಿಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ರಾಜ್ಯದಲ್ಲಿ ರೈತರ ಸಾಲ ಮನ್ನಾ ಮತ್ತು ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ತ್ವರಿತ ಪೂರ್ಣಕ್ಕೆ ಸಂಬಂಧಿಸಿದಂತೆ ರಾಜ್ಯ ರೈತ ಸಂಘದ ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದೆ. ರಾಜ್ಯದಲ್ಲಿ ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲದ ಮೊತ್ತ ಇನ್ನೂ ಸಾಕಷ್ಟಿದೆ. ಅದನ್ನೂ ಮನ್ನಾ ಮಾಡಬೇಕೆಂದು ಒತ್ತಾಯಿಸಲಾಗಿದೆ.
ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.
ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾಗಾಗಿ ಜು.3ಕ್ಕೆ ಪ್ರತಿಭಟನೆ
ಸರ್ಕಾರ ರೈತರ 8165 ಕೋಟಿ ರು. ಸಾಲ ಮನ್ನಾ ಮಾಡಿರುವುದು ಸ್ವಾಗತಾರ್ಹವಾಗಿದ್ದು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲಮನ್ನಾಗೆ ಆಗ್ರಹಿಸಿ ಜು. 3ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತ ಸಂಘದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಸಾಲಮನ್ನಾಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲಿದ್ದಾರೆ ಎಂದರು.
