ಕೆಆರ್’ಎಸ್ ಜಲಾಶಯದಿಂದ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಂಡ್ಯ ರೈತರಲ್ಲಿ ಆಕ್ರೋಶ ಭುಗಿಲೆದ್ದಿದೆ. ತಮಿಳುನಾಡಿಗೆ ನೀರು ಬಿಟ್ಟ ಮೇಲೆ, ಜಿಲ್ಲೆಯ ನಾಲೆಗಳಿಗೂ ನೀರು ಬಿಡುವಂತೆ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಂಡ್ಯ: ಕೆಆರ್’ಎಸ್ ಜಲಾಶಯದಿಂದ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಂಡ್ಯ ರೈತರಲ್ಲಿ ಆಕ್ರೋಶ ಭುಗಿಲೆದ್ದಿದೆ.
ತಮಿಳುನಾಡಿಗೆ ನೀರು ಬಿಟ್ಟ ಮೇಲೆ, ಜಿಲ್ಲೆಯ ನಾಲೆಗಳಿಗೂ ನೀರು ಬಿಡುವಂತೆ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜತೆಗೆ ಕಾವೇರಿ ನೀರಾವರಿ ಕಚೇರಿಗೆ ಕೂಡಾ ರಯತರು ಮುತ್ತಿಗೆ ಹಾಕಿದ್ದಾರೆ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
