Asianet Suvarna News Asianet Suvarna News

ಮಹಾರಾಷ್ಟ್ರ: ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ

ಮಧ್ಯಪ್ರದೇಶದ ಬಳಿಕ ಈಗ ಮಹಾರಾಷ್ಟ್ರದ ರೈತರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಮಾನ ನಿಲ್ದಾಣ ನಿರ್ಮಿಸಲು ರಕ್ಷಣಾ ಇಲಾಖೆಯು ನೆವಲಿ ಗ್ರಾಮದಲ್ಲಿ 1600 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದರ ವಿರುದ್ಧ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Farmers Protest Turns Violent in Maharashtra
  • Facebook
  • Twitter
  • Whatsapp

ಥಾಣೆ: ಮಧ್ಯಪ್ರದೇಶದ ಬಳಿಕ ಈಗ ಮಹಾರಾಷ್ಟ್ರದ ರೈತರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಮಾನ ನಿಲ್ದಾಣ ನಿರ್ಮಿಸಲು ರಕ್ಷಣಾ ಇಲಾಖೆಯು ನೆವಲಿ ಗ್ರಾಮದಲ್ಲಿ 1600 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದರ ವಿರುದ್ಧ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಥಾಣೆ –ಬದ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ರೈತರು ನಡೆಸುತ್ತಿದ್ದ  ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿದೆ. ರೈತರ ಕೋಪಕ್ಕೆ ಮೂರು ಪೊಲೀಸ್ ವಾಹನಗಳು ಬೆಂಕಿಗಾಹುತಿಯಾಗಿದ್ದರೆ, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ತುಕಡಿಗಳನ್ನು ಕರೆಸಲಾಗಿದೆ.

ಕಳೆದ ಜೂ.1 ರಿಂದ 11ರವರೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದಾದ್ಯಂತ ರೈತರು ಪ್ರತಿಭಟನೆಗಳನ್ನು ನಡೆಸಿದ್ದರು.

ಚಿತ್ರ:ಏಎನ್'ಐ

Follow Us:
Download App:
  • android
  • ios