ಮಧ್ಯಪ್ರದೇಶದ ಟೀಕಮ್’ಗಡ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಹಿಂದಿರುಗುತ್ತಿದ್ದ ರೈತರನ್ನು ವಶಕ್ಕೆ ಪಡೆದ ಪೊಲೀಸರು, ನಗ್ನಗೊಳಿಸಿ ಹಲ್ಲೆ ನಡೆಸಿದ ಆಪಾದನೆ ಕೇಳಿಬಂದಿದೆ.

ಟೀಕಮ್‌ಗಡ (ಮ.ಪ್ರ.): ಮಧ್ಯಪ್ರದೇಶದ ಟೀಕಮ್’ಗಡ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಹಿಂದಿರುಗುತ್ತಿದ್ದ ರೈತರನ್ನು ವಶಕ್ಕೆ ಪಡೆದ ಪೊಲೀಸರು, ನಗ್ನಗೊಳಿಸಿ ಹಲ್ಲೆ ನಡೆಸಿದ ಆಪಾದನೆ ಕೇಳಿಬಂದಿದೆ.

ಆದರೆ, ಈ ಆರೋಪವನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ನಿರಾಕರಿಸಿದೆ. ಮಧ್ಯಪ್ರದೇಶ ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ದೂರಿದೆ.

ರೈತರ ಮೇಲಿನ ಹಲ್ಲೆಗೆ ಸಂಬಂಧಿಸಿ, ಅಲ್ಲಿನ ಗೃಹ ಸಚಿವ ಭೂಪೇಂದ್ರ ಸಿಂಗ್ ತನಿಖೆಗೆ ಆದೇಶಿಸಿದ್ದು, ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಮಳೆ ಕೊರತೆ ಹಿನ್ನೆಲೆಯಲ್ಲಿ, ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಆಯೋಜಿಸಿತ್ತು.