Asianet Suvarna News Asianet Suvarna News

ಫಾರೂಖ್ ಬಂಧನವಾಗಿಲ್ಲ ಎಂದ ಶಾ: ಸುಳ್ಳು ಹೇಳುತ್ತಿದ್ದಾರೆ ಎಂದ ಅಬ್ದುಲ್ಲಾ!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ| ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರಿ ನಾಯಕರ ಬಂಧನ| ಫಾರೂಖ್ ಅಬ್ದುಲ್ಲಾ ಎಂದು ಕೇಳಿದ ವಿಪಕ್ಷಗಳು| ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿಲ್ಲ ಎಂದ ಕೇಂದ್ರ ಗೃಹ ಸಚಿವ| ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ ಎಂದ ಫಾರೂಖ್ ಅಬ್ದುಲ್ಲಾ|

Farooq Abdullah Accuses Amit Sha Lying As He Was Detained At Home
Author
Bengaluru, First Published Aug 6, 2019, 5:57 PM IST
  • Facebook
  • Twitter
  • Whatsapp

ನವದೆಹಲಿ(ಆ.06): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರಿ ರಾಜಕೀಯ ನಾಯಕರನ್ನು ಕೇಂದ್ರ ಸರ್ಕಾರ ಬಂಧಿಸಲಾಗಿತ್ತು.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳು, ಕಾಶ್ಮೀರ ಕುರಿತು ಚರ್ಚೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಹಿರಿಯ ಕಾಶ್ಮೀರಿ ನಾಯಕ ಫಾರೂಖ್ ಅಬ್ದುಲ್ಲಾ ಎಲ್ಲಿ ಎಂದು ಪ್ರಶ್ನಿಸಿದವು.

ಇದಕ್ಕೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಫಾರೂಖ್ ಅಬ್ದುಲ್ಲಾ ಅವರನ್ನು ಸರ್ಕಾರ ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಗೃಹ ಸಚಿವರ ಹೇಳಿಕೆಯನ್ನು ಖಂಡಿಸಿರುವ ಫಾರೂಖ್ ಅಬ್ದುಲ್ಲಾ, ಅಮಿತ್ ಶಾ ಸುಳ್ಳು ಹೇಳುತ್ತಿದ್ದು ನಿನ್ನೆ ರಾತ್ರಿಯಿಂದ ತಮ್ಮನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಗುಡುಗಿದ್ದಾರೆ.

Follow Us:
Download App:
  • android
  • ios