ಪಾಕ್ ಆಕ್ರಮಿತ ಕಾಶ್ಮೀರವು ಪಾಕಿಸ್ತಾನಕ್ಕೆ ಸೇರಿದ್ದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಇದೀಗ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮ್ಮು: ಪಾಕ್ ಆಕ್ರಮಿತ ಕಾಶ್ಮೀರವು ಪಾಕಿಸ್ತಾನಕ್ಕೆ ಸೇರಿದ್ದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಇದೀಗ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ನೀತಿಗಳು ಕೋಮು ಗಲಭೆಗಳು ಮತ್ತು ದೇಶವನ್ನು ಚೂರು- ಚೂರು ಮಾಡಲಿವೆ ಎಂದು ಫಾರೂಕ್ ಅಬ್ದುಲ್ಲಾ ಎಚ್ಚರಿಸಿದ್ದಾರೆ.
ಈ ಬಗ್ಗೆ ಶನಿವಾರ ಮಾತನಾಡಿದ ಫಾರೂಕ್, ‘ಭಾರತವನ್ನು ಎಷ್ಟು ಭಾಗವಾಗಿ ಚೂರು ಮಾಡುತ್ತೀರಿ,’ ಎಂದು ಕೇಂದ್ರಕ್ಕೆ ಪ್ರಶ್ನಿಸಿದ್ದಾರೆ.
ಈ ನಡುವೆ, ಪಾಕ್ ಆಕ್ರಮಿತ ಕಾಶ್ಮೀರದ ಕುರಿತ ಹೇಳಿಕೆ ಸಂಬಂಧ ಫಾರೂಕ್ ವಿರುದ್ಧ ದೂರು ದಾಖಲಾಗಿದೆ.
