ವ್ಯಕ್ತಿಯೊಬ್ಬನ ವಿರುದ್ಧ ಮಲಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ತಲಘಟ್ಟಪುರದ ಅಂಜನಾಪುರದಲ್ಲಿ ಈ ಘಟನೆ ನಡೆದಿದ್ದು, ರಮೇಶ್ ಎಂಬಾತ ತನ್ನ ಮಲ ಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಹೊತ್ತಿದ್ದಾನೆ.
ಬೆಂಗಳೂರು(ಅ.22): ವ್ಯಕ್ತಿಯೊಬ್ಬನ ವಿರುದ್ಧ ಮಲಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ತಲಘಟ್ಟಪುರದ ಅಂಜನಾಪುರದಲ್ಲಿ ಈ ಘಟನೆ ನಡೆದಿದ್ದು, ರಮೇಶ್ ಎಂಬಾತ ತನ್ನ ಮಲ ಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಹೊತ್ತಿದ್ದಾನೆ.
ಯಶೋಧ ಎಂಬ 19 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಮೂರು ವರ್ಷದ ಹಿಂದೆ ಯಶೋಧಾ ತಾಯಿ ಲಕ್ಷ್ಮೀ ತನ್ನ ಮೊದಲ ಗಂಡ ಬ್ಯಾಡಪ್ಪ ಎಂಬಾತನನ್ನು ಬಿಟ್ಟು ರಮೇಶ್'ನನ್ನು ಮದುವೆಯಾಗಿದ್ದಳು. ಈ ವೇಳೆ ಯಶೋಧಾ ಕೂಡ ತನ್ನ ತಾಯಿಯೊಂದಿಗೆ ರಮೇಶ'ನ ಮನೆಗೆ ಹೋಗಿದ್ದಳು. ಆದರೆ ತನ್ನ ಮಗಳ ಸಮಾನಳಾದ ಯಶೋಧ ಜತೆ ರಮೇಶ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಈ ವಿಚಾರ ಯಶೋಧಾಳ ತಾಯಿಗೆ ಗೊತ್ತಾಗುತ್ತದೆ ಎಂಬ ಕಾರಣದಿಂದ ರಮೇಶ್ ಆಕೆಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯಶೋಧ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಈ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪ ಹೊತ್ತ ರಮೇಶ್ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
