ಬಿಜೆಪಿ ಶಾಸಕನಿಂದ ಅತ್ಯಾಚಾರ : ಮಹಿಳೆ ತಂದೆ ಪೊಲೀಸ್ ಕಸ್ಟಡಿಯಲ್ಲಿ ಸಾವು

Father of woman Allegedly Raped by Uttar Pradesh BJP MLA dead in Police custody
Highlights

ಉತ್ತರ ಪ್ರದೇಶದಲ್ಲಿ ಬಿಜೆಪಿ ಎಂಎಲ್ಎಯಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ತಂದೆ ಪೊಲೀಸ್ ಕಸ್ಟಡಿಯಲ್ಲೇ ಸಾವನ್ನಪ್ಪಿದ್ದಾರೆ.

ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿ ಎಂಎಲ್ಎಯಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ತಂದೆ ಪೊಲೀಸ್ ಕಸ್ಟಡಿಯಲ್ಲೇ ಸಾವನ್ನಪ್ಪಿದ್ದಾರೆ.

ಬಿಜೆಪಿ ಎಂಎಲ್ಎ ಕುಲ್’ದೀಪ್ ಸಿಂಗ್’ರಿಂದ  ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಮನೆ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ನಿಟ್ಟಿನನಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆಯ ತಂದೆಯನ್ನು ಬಂಧಿಸಲಾಗಿತ್ತು.

ಇದೀಗ ಅವರು ಪೊಲೀಸ್ ಕಸ್ಟಡಿಯಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ  ಕಾಂಗ್ರೆಸ್ ವಕ್ತಾರರಾದ ರಣ್’ದೀಪ್ ಸರ್ಜೆವಾಲಾ ಅವರು ಬಿಜೆಪಿಯದ್ದು ಗೂಂಡಾ ರಾಜ್ಯ ಎಂದು ಆರೋಪ ಮಾಡಿದ್ದಾರೆ.

loader