ಇಸ್ಲಾಮಾಬಾದ್(ಜು.21): ಸರ್ಕಾರಿ ಆಸ್ಪತ್ರೆ ಬಳಿ ಮಹಿಳಾ ಸೂಸೈಡ್ ಬಂಬರ್ ನಡೆಸಿದ ದಾಳಿಯಲ್ಲಿ, ಕನಿಷ್ಟ 9 ಜನರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಇಲ್ಲಿನ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಮುಖ್ಯ ದ್ವಾರದಲ್ಲಿ ಮಹಿಳಾ ಬಾಂಬರ್ ದಾಳಿ ನಡೆಸಿದ್ದು, ಸ್ಥಳದಲ್ಲೇ 9 ಜನರು ಹತರಾಗಿದ್ದಾರೆ.

ತೀವ್ರ ನಿಗಾ ಘಟಕಕ್ಕೆ ಪ್ರವೇಶಿಸುವ ಜನರು ಮತ್ತು ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರ ಪೈಕಿ ಏಳು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.