500 ರೂಪಾಯಿ ನೋಟ್ ಮೇಲೆ ಹಿಂಕ್ ಬಿದ್ದಿದೆ ಎಂಬ ಕಾರಣಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಬೆಂಗಳೂರು(ಮೇ.27): 500 ರೂಪಾಯಿ ನೋಟ್ ಮೇಲೆ ಹಿಂಕ್ ಬಿದ್ದಿದೆ ಎಂಬ ಕಾರಣಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ಚನ್ನಪ್ಪ ಬಡಾವಣೆಯ ಭಾರತ್ ಪೆಟ್ರೋಲಿಯಂ ಬಂಕ್'ನಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಗ್ರಾಹಕರಾದ 32 ವರ್ಷ ಅಪ್ಸರ್ , 20 ವರ್ಷದ ಪಾಷ, 19 ವರ್ಷ ಅಂಜರ್ ಬೇಗ್ ಸೇರಿ 19 ಗಾಯಗೊಂಡಿದ್ದಾರೆ. ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕ ಹಿಂಕ್ ಬಿದ್ದಿರುವ 500 ರೂಪಾಯಿ ನೋಟ್ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ನೀಡಿದ್ದಾನೆ. ಪೆಟ್ರೋಲ್ ಬಂಕ್ ಸಿಬ್ಬಂದಿ ನೋಟ್ ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾನೆ. ಆಗ ನೋಟ್ ವಿಚಾರವಾಗಿ ಇಬ್ಬರ ಮಧ್ಯೆ ಭಾರೀ ಮಾತಿನ ಚಕಮಕಿ ನಡೆದಿದೆ.
ಸಿಟ್ಟಿನಿಂದ ಪೆಟ್ರೋಲ್ ಬಂಕ್ ಸಿಬ್ಬಂದಿ ಗ್ರಾಹಕರ ಮೇಲೆ ಹಲ್ಲೆಗೆ ಮುಂದಾಗಿದ್ದು, ಇದನ್ನ ನೋಡಿದ ಸ್ಥಳೀಯರು ಗಲಾಟೆ ಬಿಡಿಸಲು ಪ್ರಯತ್ನಿಸಿದ್ದಾರೆ. ಆದರೂ ಪೆಟ್ರೋಲ್ ಬಂಕ್ ಸಿಬ್ಬಂದಿ ಮನಬಂದಂತೆ ಹಲ್ಲೆ ಮಾಡಿದ್ದರಿಂದ 19 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವನ್ನು ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
