ಕನ್ನಡ ಜನಶಕ್ತಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನ್ನಡ ಚಳವಳಿಗಾರ ಸಿ. ಗುರುಶಾಂತ ಮೂರ್ತಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡವನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸೇರಿದಂತೆ ನಾಡಿನ ಪ್ರತಿಯೊಬ್ಬರೂ ಹೋರಾಡಬೇಕಿದೆ ಎಂದು ಹೇಳಿದರು.

ಬೆಂಗಳೂರು: ತಮಿಳು, ತೆಲುಗು, ಮಲಯಾಳಂ ಸೇರಿದಂತೆ ವಿವಿಧ ಭಾಷಿಕರು ವಾಸಿಸುವ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕನ್ನಡ ರಕ್ಷಣೆ ಹೋರಾಟ ಅನಿವಾರ್ಯವಾಗಿದ್ದು, ಸದ್ಯದಲ್ಲಿಯೇ ಹೋರಾಟ ಆರಂಭಿಸುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ಕನ್ನಡ ಜನಶಕ್ತಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನ್ನಡ ಚಳವಳಿಗಾರ ಸಿ. ಗುರುಶಾಂತ ಮೂರ್ತಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡವನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸೇರಿದಂತೆ ನಾಡಿನ ಪ್ರತಿಯೊಬ್ಬರೂ ಹೋರಾಡಬೇಕಿದೆ ಎಂದು ಹೇಳಿದರು.

ಕನ್ನಡ ಚಳವಳಿ ವಿಚಾರದಲ್ಲಿ ಗುರುಶಾಂತಮೂರ್ತಿ ಅವರ ಕೊಡುಗೆ ಅಪಾರವಾದದ್ದು. ನನ್ನೊಂದಿಗೆ ಅವರು ಕೈಜೋಡಿಸಿರಲಿಲ್ಲ ಎಂದರೆ, ಕನ್ನಡ ಚಳವಳಿಗಳು ಸಾಧ್ಯವಾಗುತ್ತಿರಲಿಲ್ಲ. ಗುರುಶಾಂತ ಮೂರ್ತಿ ಹಠವಾದಿ ಮತ್ತು ಸ್ವಾಭಿಮಾನಿಯಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ, ಕನ್ನಡ ಹೋರಾಟಗಾರರಾದ ಟಿ.ಪಿ. ಪ್ರಸನ್ನಕುಮಾರ, ಪಾಲನೇತ್ರ ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ
epaper.kannadaprabha.in