ಮುಂಬೈ : NCP ಮಾಜಿ ಮುಖಂಡರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿನಿಮಾ ನಿರ್ಮಾಪಕರೂ ಆಗಿರುವ ಪಪ್ಪು ಲಾಡ್ ಎನ್ನುವ ವ್ಯಕ್ತಿ ಮುಂಬೈನ ಗಣಪತಿ ದೇವಾಲಯ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಪಪ್ಪು ಲಾಡ್ ಆತ್ಮಹತ್ಯೆ ಮಾಡಿಕೊಂಡ ಪ್ರದೇಶದಲ್ಲಿ ಆತ್ಮಹತ್ಯೆ ಪತ್ರವೊಂದು ಪತ್ತೆಯಾಗಿದ್ದು, ಅದರಲ್ಲಿ ಬಿಲ್ಡರ್ ಓರ್ವರು ದೌರ್ಜನ್ಯದಿಂದ ಬೇಸತ್ತು ಜೀವನ ಕೊನೆಗೊಳಿಸುತ್ತಿರುವುದಾಗಿ ಬರೆದಿಟ್ಟಿದ್ದಾರೆ. 

ಈ ಸಂಬಂಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪಪ್ಪು ಲಾಡ್ LG ಪ್ರೊಡಕ್ಷನ್ ಅಡಿಯಲ್ಲಿ ಅನೇಕ ಮರಾಠಿ  ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.