ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣವೊಂದು ಇದೀಗ ಹೈ ಕೋರ್ಟ್ ರದ್ದು ಮಾಡಿದೆ. ವಿಚಾರಣೆ ಹಾಗೂ ಎಫ್ ಐ ಆರ್ ಎರಡನ್ನೂ ರದ್ದು ಮಾಡಲಾಗಿದೆ.
ಬೆಂಗಳೂರು(ಜೂ.20) : ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧದ ಬಜಪೆ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಮತ್ತು ಪ್ರಕರಣ ಕುರಿತ ಅಧೀನ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಆದೇಶ ಮಾಡಿದೆ.
