ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ..ಸತ್ಯಾಸತ್ಯತೆ ಏನು?
ಕಾಂಗ್ರೆಸ್ ನ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಈ ಹಿಂದೆ ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ಕೆಲಸ ಮಾಡಿದ್ದ ಮಹಿಳೆಯೋರ್ವರು ದೂರು ನೀಡಿದ್ದು, ಸೋಶಿಯಲ್ ಮಿಡಿಯಾಸೆಲ್‌ನಲ್ಲಿ ಕೆಲಸ ಮಾಡುವ ಪಕ್ಷದ ಹಿರಿಯ ನಾಯಕರ ವಿರುದ್ದ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಸೋಶಿಯಲ್ ಮೀಡಿಯಾ ಜವಾಬ್ದಾರಿ ಹೊತ್ತುಕೊಂಡಿರುವ ರಮ್ಯಾ ಸಹ ಯಾವುದೆ ನೆರವು ನೀಡಿಲ್ಲ ಎಂದು ಆರೋಪ ಮಾಡಿದ್ದಾರೆ.

ಮಹಿಳೆ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ಸದ್ಯ ಕಾಂಗ್ರೆಸ್ ಮಿಡಿಯಾ ಸೆಲ್‌ನಲ್ಲಿ ಕೆಲಸ ಮಾಡುತ್ತಿರುವ ಪಕ್ಷದ ಸದಸ್ಯರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲಸದ ವೇಳೆ ಹಿಂದಿನಿಂದ ಬಂದು ತಮ್ಮನ್ನು ಮುಟ್ಟುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದನ್ನೇ ಆ ನಾಯಕ ತನ್ನ ಕಾಯಕ ಮಾಡಿಕೊಂಡಿದ್ದ ಎಂದು ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಹಾಗಾದರೆ ಸತ್ಯಾಸತ್ಯೆ ಏನು?