ಆಹಾರ ಸಚಿವ ಯು.ಟಿ.ಖಾದರ್ ಹಾಗೂ ಅವರ ಕಾರು ಚಾಲಕನ ವಿರುದ್ಧ FIR ದಾಖಲಾಗಿದೆ. ಕಳೆದ 27ರಂದು ಗುಂಡ್ಲುಪೇಟೆಯಲ್ಲಿ ಕಾರಿನಲ್ಲಿ ಕುಳಿತು ಹಣ ಹಂಚಿದ್ದಾರೆಂದು ಆಹಾರ ಸಚಿವ ಯು.ಟಿ.ಖಾದರ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಾಧ್ಯಮಗಳು ವರದಿಯನ್ನು ಪ್ರಸಾರ ಮಾಡಿದ್ದವು.
ಮಂಗಳೂರು(ಮಾ.30): ಆಹಾರ ಸಚಿವ ಯು.ಟಿ.ಖಾದರ್ ಹಾಗೂ ಅವರ ಕಾರು ಚಾಲಕನ ವಿರುದ್ಧ FIR ದಾಖಲಾಗಿದೆ. ಕಳೆದ 27ರಂದು ಗುಂಡ್ಲುಪೇಟೆಯಲ್ಲಿ ಕಾರಿನಲ್ಲಿ ಕುಳಿತು ಹಣ ಹಂಚಿದ್ದಾರೆಂದು ಆಹಾರ ಸಚಿವ ಯು.ಟಿ.ಖಾದರ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಾಧ್ಯಮಗಳು ವರದಿಯನ್ನು ಪ್ರಸಾರ ಮಾಡಿದ್ದವು.
ಮಾಧ್ಯಮಗಳ ವರದಿ ಆಧರಿಸಿ ಸಚಿವ ಖಾದರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಸಂಬಂಧ ಚುನಾವಣಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
