ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡುತ್ತಲೇ ಸುದ್ದಿ ಮಾಡುವ ನಟ ಪ್ರಕಾಶ್ ರೈ ವಿರುದ್ಧ  ಎಫ್ ಐಆರ್ ದಾಖಲಾಗಿದೆ.  ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಗೋವಿನ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದಾರೆ.  

ಬೆಂಗಳೂರು[ಆ.31]  ಗೋವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕಾಶ್ ರೈ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿರಣ್ ಎನ್ ಎಂಬುವರು ರೈ ಗೋವಿನ ಹೇಳಿಕೆ ವಿರುದ್ಧ ಪಿಸಿಆರ್ ಹಾಕಿದ್ದರು.

ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚನೆ ಮೇರೆಗೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕಾಶ್​ ರೈ ವಿರುದ್ಧ 295 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರೈ, ನಿಮ್ಮ ಕೆಲಸವೇನಿದ್ದರೂ ಸುಳ್ಳು ಕೇಸ್ ಗಳನ್ನು ದಾಖಲಿಸುವುದಷ್ಟೇ.. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸುವುದೇ ನಿಮ್ಮ ಕೆಲಸ. ನೀವು ಎಷ್ಟೇ ಪ್ರಯತ್ನ ಪಟ್ಟು ಕೇಸುಗಳನ್ನು ಹಾಖಿದರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…