ಚುನಾವಣೆ ಹೊಸ್ತಿಲ್ಲಲ್ಲಿ ಇರುವಾಗಲೇ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು (ಡಿ.08): ಚುನಾವಣೆ ಹೊಸ್ತಿಲ್ಲಲ್ಲಿ ಇರುವಾಗಲೇ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಲೋಕಾಯುಕ್ತ ವಿಶೇಷ ತನಿಖಾ ತಂಡ ಎಫ್ಐಆರ್ ದಾಖಲಿಸಿದೆ. ಇದರಿಂದ ಕಾಂಗ್ರೆಸ್ ಗೆ ಮುಜುಗರವಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೆನರಾ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಅದಿರು ಸಾಗಣೆ ಅನುಮತಿ ಪಡೆದಿತ್ತು. ಆದ್ರೆ 2010ರಿಂದ ಎರಡು ವರ್ಷ ನಿಯಮ ಮೀರಿ ಸುಮಾರು 12.30 ಕೋಟಿ ರೂಪಾಯಿ ಮೊತ್ತದ 82 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಣೆ ಮಾಡಿದ ಆರೋಪದ ಮೇಲೆ ಕಂಪನಿ ಎಂ.ಡಿ. ಆಗಿರುವ ಅನಿಲ್ ಲಾಡ್ ಸೇರಿ ಇತರರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈಗಾಗಲೇ 73 ಎಫ್ ಐಆರ್ ದಾಖಲಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ 28 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. 20 ಪ್ರಕರಣಗಳ ಕುರಿತು ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.
