ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆ.ಆರ್ ಮಾರ್ಕೆಟ್’ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ.
ಬೆಂಗಳೂರು (ಜ.08): ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆ.ಆರ್ ಮಾರ್ಕೆಟ್’ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ.
ಇಲ್ಲಿರುವ ಕೈಲಾಶ್ ಬಾರ್’ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬಾರ್’ನಲ್ಲಿ ಮಲಗಿದ್ದ ಐವರೂ ಕೂಡ ಸಜೀವ ದಹನವಾಗಿದ್ದಾರೆ. ಮಂಜುನಾಥ್ , ಕೀರ್ತಿ, ಮಹೇಶ್, ಸ್ವಾಮಿ ಹಾಗೂ ಪ್ರಸಾದ್ ಸುಟ್ಟು ಕರಕಲಾಗಿದ್ದಾರೆ. ಮುಂಜಾನೆ 2.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬಾರ್’ನ ಕೆಳಮಹಡಿಗೆ ಬೆಂಕಿ ಬಿದ್ದಿದೆ. ಈ ವೇಳೆ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದವರು ಹೊಗೆ ಬರುತ್ತಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಳಿಕ ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. 25 ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿ ಡಿಸಿಪಿ ಅನುಚೇತ್ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ.
