ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡು ಕಚೇರಿಯಲ್ಲಿದ್ದ ಅಪಾರ ಪ್ರಮಾಣದ ದಾಖಲೆಗಳು ಸುಟ್ಟು ಹೋಗಿವೆ.
ಚಿತ್ರದುರ್ಗ(ಡಿ.10): ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡು ಕಚೇರಿಯಲ್ಲಿದ್ದ ಅಪಾರ ಪ್ರಮಾಣದ ದಾಖಲೆಗಳು ಸುಟ್ಟು ಹೋಗಿವೆ.
ಅನೇಕ ದಾಖಲೆ ಪತ್ರಗಳನ್ನು ಇರಿಸಿದ್ದ ಕೊಠಡಿಗೆ ಬೆಂಕಿ ತಗುಲಿದ್ದು, ಎಲ್ಲಾ ದಾಖಲೆಗಳೂ ಕೂಡ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮುಂಭಾಗದಲ್ಲಿರುವ ಈ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್'ನಿಂದ ಬೆಂಕಿ ತಗುಲಿರುವ ಸಾಧ್ಯತೆಗಳಿವೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡಬೇಕಾಯಿತು. ಸ್ಥಳಕ್ಕೆ ತಹಶಿಲ್ದಾರ್ ಮಲ್ಲಿಕಾರ್ಜುನ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
