ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ಕನ್ನಡ ಬಿಗ್ ಬಾಸ್ ಕಾರ್ಯಕ್ರಮ ನಡೆದ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ರಾಮನಗರ : ರಾಮನಗರ ತಾಲೂಕಿನ ಬಿಡದಿ ಬಳಿ ಇರುವ ಕನ್ನಡ ಬಿಗ್ ಬಾಸ್ ಕಾರ್ಯಕ್ರಮ ನಡೆದ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮ್ಯೂಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮ್ಯೂಸಿಯಂ ನಲ್ಲಿರುವ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಇರುವ ಕಾರಣ ಹತೋಟಿಗೆ ಬರಲಿಲ್ಲ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.