ಹಬ್ಬದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಹಣ್ಣುಗಳ ಸಂಗ್ರಹ | ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ
ಕೊಪ್ಪಳ (ಅ.10): ನಿನ್ನೆ ತಡರಾತ್ರಿ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ತೆರದಿದ್ದ ಹಣ್ಣಿನ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ.
ದಸ್ತಗಿರಸಾಬ್ ಎಂಬುವರಿಗೆ ಸೇರಿದ ಅಂಗಡಿ ಸಂಪೂರ್ಣ ಭಸ್ಮವಾಗಿದ್ದು, ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಬಗೆಯ ಹಣ್ಣುಗಳು ಬೆಂಕಿಗಾಹುತಿಯಾಗಿದೆ.
ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಹಣ್ಣುಗಳನ್ನು ಮಾರಾಟ ಮಾಡಲು ಸಂಗ್ರಹಿಸಿಡಲಾಗಿತ್ತು. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
