ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದೆ

ಇನ್ನೂ ವೈಕುಂಠ ಏಕಾದಶಿಯಂದೇ ವಾಣಿಜ್ಯ ನಗರಿ ಮುಂಬೈನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಕಮಲಾ ಮಿಲ್‌ ಕಾಂಪೌಂಡ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ 15 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ 8 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ. ನಾಲ್ಕು ಮಹಡಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.