ಅಹಮದಾಬಾದ್(ಡಿ.28): ಇಲ್ಲಿನ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಕೇಂದ್ರದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ದಳದ 5 ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಇಸ್ರೋ ಕಚೇರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಘಟನೆಯಲ್ಲಿ ಯಾವುದೇ ಹಾನಿಯಾದ ಕುರಿತು ಈವರೆಗೂ ಖಚಿತ ಮಾಹಿತಿ ಬಂದಿಲ್ಲ.

ಸದ್ಯ 5 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ ಎನ್ನಲಾಗಿದೆ. ಇನ್ನು ಬೆಂಕಿ ಅನಾಹುತದಿಂದಾಗಿ ಪೊಲೀಸರು ಇಸ್ರೋ ಸುತ್ತಮುತ್ತ ಸಂಚಾರ ನಿಷೇಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.