NEKRTC ಡಿಪೋ-2 ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. 

ಕಲಬುರಗಿ (ಫೆ. 28): NEKRTC ಡಿಪೋ-2 ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. 
8 ಬಸ್‌ಗಳು ಸುಟ್ಟು ಭಸ್ಮವಾಗಿವೆ. ಹಲವು ಬಸ್‌’ಗಳಿಗೆ ವ್ಯಾಪಿಸಿರುವ ಬೆಂಕಿ, ನೂರಾರು ಟೈರ್​​​ಗಳು ಬೆಂಕಿಗಾಹುತಿಯಾಗಿವೆ. ಸ್ಥಳದಲ್ಲಿ ಹೊಗೆ ದಟ್ಟವಾಗಿ ಆವರಿಸಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಗ್ನಿ ಅವಗಢ ಸಂಭವಿಸಲು ಕಾರಣ ತಿಳಿದು ಬಂದಿಲ್ಲ. ಯಾವುದೇ ಪ್ರಾಣಾಪಾಯವಾಗಿಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred