ಮೈಸೂರು ರಸ್ತೆಯ ವಿನಾಯಕ ನಗರದಲ್ಲಿ ಭಾರೀ ಅಗ್ನಿ ಅವಗಢ ಸಂಭವಿಸಿದೆ. ಇಲ್ಲಿರುವ ಕುರ್ಚಿ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿಗಾಹುತಿಯಾಗಿವೆ.
ಬೆಂಗಳೂರು (ಮಾ.31): ಮೈಸೂರು ರಸ್ತೆಯ ವಿನಾಯಕ ನಗರದಲ್ಲಿ ಭಾರೀ ಅಗ್ನಿ ಅವಗಢ ಸಂಭವಿಸಿದೆ. ಇಲ್ಲಿರುವ ಕುರ್ಚಿ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿಗಾಹುತಿಯಾಗಿವೆ.
ಕಟ್ಟಡದೊಳಗೆ 4 ಕಾರ್ಮಿಕರು ಸಿಲುಕಿದ್ದು, ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದ್ದು, ಒಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯ ನಡೆಯುತ್ತಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ.
