ಭದ್ರತಾ ಪಡೆ ಕಟ್ಟಡವನ್ನು ಸುತ್ತುವರಿದಿದ್ದು ಭಾರೀ ಗುಂಡಿನ ಕಾಳಗ ಮುಂದುವರೆದಿದೆ ಎನ್ನಲಾಗಿದೆ
ಪಾಂಪೋರ್, ಜಮ್ಮು-ಕಾಶ್ಮೀರ (ಅ.10): ಜಮ್ಮು-ಕಾಶ್ಮೀರದ ಪಾಂಪೋರ್ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದ ಪುಲ್ವಾಮಾ ಜಿಲ್ಲೆಯ ಪಾಂಪೋರ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಗಾಯಗೊಂಡಿದ್ದಾನೆ.
ಸರ್ಕಾರಿ ಕಟ್ಟಡವೊಂದರಲ್ಲಿ ಅಡಗಿರುವ ಉಗ್ರರು ಹಾಗೂ ಭಾರತೀಯ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭದ್ರತಾ ಪಡೆ ಕಟ್ಟಡವನ್ನು ಸುತ್ತುವರಿದಿದ್ದು ಭಾರೀ ಗುಂಡಿನ ಕಾಳಗ ಮುಂದುವರೆದಿದೆ ಎನ್ನಲಾಗಿದೆ.
ಕಟ್ಟಡದಲ್ಲಿ ಕಳೆದ ಫೆಬ್ರವರಿಯಲ್ಲಿ ಇದೇ ಕಟ್ಟಡದ ಮೇಲೆ ದಾಳಿ ನಡೆದಿತ್ತು. ದಾಳಿಯಲ್ಲಿ ಮೂವರು ಉಗ್ರರನ್ನು ಕೊಲ್ಲಲಾಗಿತ್ತು. ಅಲ್ಲದೇ ಮೂವರು ಭಾರತೀಯ ಯೋಧರು, ಓರ್ವ ನಾಗರಿಕ ಮೃತಪಟ್ಟಿದ್ದರು.
(ಸಾಂದರ್ಭಿಕ ಚಿತ್ರ)
