ಪಲ್ಸರ್ ಬೈಕ'ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸ್ ಮೂರ್ತಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಾಳುವಾದ ಶ್ರೀನಿವಾಸ್ ಮೂರ್ತಿಯನ್ನು ಹತ್ತಿರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು(ಫೆ.03): ಬೆಂಗಳೂರಿನಲ್ಲಿ APMC ಅಧ್ಯಕ್ಷನ ಮೇಲೆ ಶೂಟೌಟ್ ನಡೆದಿದೆ. ಯಲಹಂಕದ ಕೋಗಿಲು ಕ್ರಾಸ್ ಬಳಿ APMC ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಮೇಲೆ ಬೈಕ್'ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ.

ಪಲ್ಸರ್ ಬೈಕ'ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸ್ ಮೂರ್ತಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಾಳುವಾದ ಶ್ರೀನಿವಾಸ್ ಮೂರ್ತಿಯನ್ನು ಹತ್ತಿರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ 4 ಗುಂಡುಗಳು ಲಭ್ಯವಾಗಿವೆ