ಶ್ರೀನಗರ(ಸೆ.26): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 5 ಸಿಆರ್'ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾನ್ಪೋಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ನಾಗರೀಕರಿಗೆ ಗಾಯಗಳಾಗಿರುವ ಕುರಿತಂತೆ ಇದುವರೆಗೂ ಯಾವುದೇ ವರದಿಗಳಾಗಿಲ್ಲ. ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

ಜುಲೈ 8 ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುಹ್ರಾನ್ ವಾನಿ ಹತ್ಯೆಯ ನಂತರ ಕಳೆದ ಒಂದೂವರೆ ತಿಂಗಳಿನಿಂದ ಕುಲ್ಗಾಮ್ ಜಿಲ್ಲೆಯೊಂದರಲ್ಲೇ ನಡೆದ ಗಲಭೆಯಲ್ಲಿ 90ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.