ಬೆಳಗಾವಿಯಿಂದ ಚಿಕ್ಕೋಡಿಗೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯತ್ರಣ ತಪ್ಪಿದ ಕಾರು ಪಲ್ಟಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ

ಬೆಳಗಾವಿ(ಜೂ.29): ತಾಲೂಕಿನ ವಂಟಮೂರಿ ಘಾಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ. ಇನ್ನೋವಾ ಕಾರು ಬೆಳಗಾವಿಯಿಂದ ಚಿಕ್ಕೋಡಿಗೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯತ್ರಣ ತಪ್ಪಿದ ಕಾರು ಪಲ್ಟಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಡಿಸಿಪಿ ಅಮರನಾಥ ರೆಡ್ಡಿ ಭೇಟಿ ನೀಡಿದ್ದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.