ಲಕ್ನೋ :  ಟ್ರಾಕ್ಟರ್ ಒಂದಕ್ಕೆ ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ  ಐದು  ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ  ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. 

ಬೂದಾ ಹಳ್ಳಿಯ ಬಳಿ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಅಪಘಾತವಾಗಿದೆ.

ಇವರೆಲ್ಲರೂ  ರತ್ನಘರ್ ಪ್ರದೇಶದ ದೇವಾಲಯವೊಂದಕ್ಕೆ ತೆರಳುತ್ತಿದ್ದು, ಎಲ್ಲರೂ ಭಜನ್ ಪುರ ಹಳ್ಳಿಯವರು ಎಂದು ಪೊಲೀಸರು ಹೇಳಿದ್ದಾರೆ. 

11 ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ವರ್ಮಾ ತಿಳಿಸಿದ್ದಾರೆ.