ಮಚ್ಚಿಲ್ ವಲಯದಲ್ಲಿ ಸೇನಾ ಪಡೆಗಳು ಭಾರೀ ಒಳ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ

ನವದೆಹಲಿ(ಆ.08): ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದ ಮಚ್ಚಿಲ್ ವಲಯದಲ್ಲಿ ಉಗ್ರರ ನುಸುಳುವಿಕೆಯನ್ನು ಭಾರತೀಯ ಸೇನೆ ಭಾರೀ ಕಾರ್ಯಾಚರಣೆಯ ಮೂಲಕ ತಡೆಯುವಲ್ಲಿ ಯಶಸ್ವಿಯಾಗಿದ್ದು, ಘಟನೆಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಮಚ್ಚಿಲ್ ವಲಯದಲ್ಲಿ ಸೇನಾ ಪಡೆಗಳು ಭಾರೀ ಒಳ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ. ಐವರು ಮೃತರಾಗಿದ್ದು, ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.