ಛತ್ತೀಸ್’ಗಢದ ಸುಕ್ಮಾದಲ್ಲಿ ನಕ್ಸಲರ ಅಟ್ಟಹಾಸ ಮುಂದುವರೆದಿದೆ. ಇಂದು ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 3 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಪುರ: ಛತ್ತೀಸ್’ಗಢದ ಸುಕ್ಮಾದಲ್ಲಿ ನಕ್ಸಲರ ಅಟ್ಟಹಾಸ ಮುಂದುವರೆದಿದೆ. ಇಂದು ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 3 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೋಬ್ರಾ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್’ಎಫ್)ಗಳ ಜಂಟಿ ತಂಡವು ಸುಕ್ಮಾದ ಚಿಂತಾಗುಫ ಪ್ರದೇಶದಲ್ಲಿ ನಕ್ಸಲರ ಪತ್ತೆಗಾಗಿ ಶೋಧಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಎನ್’ಕೌಂಟರ್ ನಡೆದಿದೆ.
ಗುಂಡಿನ ಚಕಮಕಿಯಲ್ಲಿ 5 ಮಂದಿ ಸಿಬ್ಬಂದಿಗೆ ಗಾಯಗಳಾಗಿವೆ, ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
(ಸಾಂದರ್ಭಿಕ ಚಿತ್ರ)
