ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಸೇಲಂ, ಮಡಿಕೇರಿಗೆ ಆರಂಭಿಸಿರುವ ಮೂರು ಫ್ಲೈ ಬಸ್‌ಗಳನ್ನು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಸೋಮವಾರ ಲೋಕಾರ್ಪಣೆಗೊಳಿಸಿದರು.

ಬೆಂಗಳೂರು (ಜ.09): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಸೇಲಂ, ಮಡಿಕೇರಿಗೆ ಆರಂಭಿಸಿರುವ ಮೂರು ಫ್ಲೈ ಬಸ್‌ಗಳನ್ನು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಸೋಮವಾರ ಲೋಕಾರ್ಪಣೆಗೊಳಿಸಿದರು.

ಶಾಂತಿನಗರ ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗದ ಘಟಕ 4ರಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಬಸ್ ಸೇವೆ ಉದ್ಘಾಟಿಸಿ ಮಾತನಾಡಿದ ಅವರು, ಫ್ಲೈ ಬಸ್‌ಗಳಿಗೆ ಪ್ರಯಾಣಿಕರು ಹಾಗೂ ಸಾರ್ವಜನಿಕ ರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಆರು ಹಾಗೂ ಕುಂದಾಪುರ ಮಾರ್ಗದಲ್ಲಿ ಎರಡು ಫ್ಲೈ ಬಸ್‌ಗಳು ಸೇವೆ ನೀಡುತ್ತಿವೆ. ಇದೀಗ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಮೂರು ಫ್ಲೈ ಬಸ್‌ಗಳನ್ನು ಸೇವೆಗೆ ಮುಕ್ತಗೊಳಿಸಲಾಗಿದೆ. ಇರದಲ್ಲಿ ಎರಡು ಬಸ್ ಸೇಲಂಗೆ ಹಾಗೂ ಮತ್ತೊಂದು ಮಡಿಕೇರಿಗೆ ಸಂಚರಿಸಲಿದೆ ಎಂದು ಹೇಳಿದರು. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್. ಆರ್. ಉಮಾಶಂಕರ್, ಉಪಾಧ್ಯಕ್ಷ ಬಸವರಾಜು ಬುಳ್ಳಾ, ನಾಗರಾಜ್ ಯಾದವ್ ಉಪಸ್ಥಿತರಿದ್ದರು.