ತಜ್ಞ ವೈದ್ಯ ಧೀರಜ್‌ ಕಾರಂತ್‌ ನೇತೃತ್ವದಲ್ಲಿ ವೈದ್ಯರ ತಂಡ ಆರೋಗ್ಯ ಪರಿಶೀಲನೆ ನಡೆಸಿದೆ.

ಬೆಂಗಳೂರು(ಮಾ.12): ಕಲುಷಿತ ಆಹಾರ ಸೇವನೆಯಿಂದಾಗಿ ಅಸ್ವಸ್ಥಗೊಂಡು ನಟಿ ರಮ್ಯಾ ಶನಿವಾರ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಚೇತರಿಕೆ ಕಂಡಿದ್ದಾರೆ. ತಜ್ಞ ವೈದ್ಯ ಧೀರಜ್‌ ಕಾರಂತ್‌ ನೇತೃತ್ವದಲ್ಲಿ ವೈದ್ಯರ ತಂಡ ಆರೋಗ್ಯ ಪರಿಶೀಲನೆ ನಡೆಸಿದೆ. ಆಹಾರ ಸೇವನೆ ಯಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಅಸ್ವಸ್ಥರಾಗಿ ದ್ದಾರೆ. ಆತಂಕ ಪಡುವ ಅಗತ್ಯ ಇಲ್ಲ. ಎಲ್ಲಾ ರೀತಿಯ ತಪಾಸಣೆ ನಡೆಸಲಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred