ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ಪಾಳಯ ಸೇರಿದ ಬಳಿಕ ಮೊಟ್ಟ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ನಾಳೆ ಭೇಟಿ ಮಾಡಲಿದ್ದಾರೆ. ನಾಳೆ ವೆಂಕಯ್ಯ ನಾಯ್ಡು ಉಪ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ. ಹಾಗಾಗಿ ಇಂದೇ ದೆಹಲಿಗೆ ದೌಡಾಯಿಸಿದ್ದಾರೆ.
ನವದೆಹಲಿ (ಆ.10): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ಪಾಳಯ ಸೇರಿದ ಬಳಿಕ ಮೊಟ್ಟ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ನಾಳೆ ಭೇಟಿ ಮಾಡಲಿದ್ದಾರೆ. ನಾಳೆ ವೆಂಕಯ್ಯ ನಾಯ್ಡು ಉಪ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ. ಹಾಗಾಗಿ ಇಂದೇ ದೆಹಲಿಗೆ ದೌಡಾಯಿಸಿದ್ದಾರೆ.
ಮೂಲಗಳ ಪ್ರಕಾರ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ಅಪಾಯಿಂಟ್ ಮೆಂಟ್ ಕೇಳಿದ್ದಾರೆನ್ನಲಾಗಿದೆ. ಒಂದು ವೇಳೆ ಮೋದಿ ಅಪಾಯಿಂಟ್ ಮೆಂಟ್ ಸಿಕ್ಕರೆ ಬಿಹಾರದಲ್ಲಿ ಎನ್’ಡಿಎ ಸರ್ಕಾರ ರಚನೆಯಾದ ಬಳಿಕ ಇದು ನಿತೀಶ್ ಕುಮಾರ್ ಹಾಗೂ ನರೇಂದ್ರ ಮೋದಿ ಮೊದಲ ಭೇಟಿ ಇದಾಗಿರುತ್ತದೆ. ಭೇಟಿಯಲ್ಲಿ ಯಾವ ವಿಚಾರವನ್ನು ಚರ್ಚಿಸುತ್ತಾರೆ ಎಂಬುದು ಕುತೂಹಲಕಾರಿಯಾದ ವಿಚಾರವಾಗಿದೆ.
