ನವದೆಹಲಿ[ಜೂ.16]: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರ ಕೈಗೊಂಡು ಪಕ್ಷದ ಚಟುವಟಿಕೆಗಳಿಂದಲೇ ದೂರ ಉಳಿದಿರುವ ಅಧ್ಯಕ್ಷ ರಾಹುಲ್‌ ಗಾಂಧಿ ಅನುಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಎರಡು ನೇಮಕಾತಿಗಳನ್ನು ಮಾಡಿದೆ.

ಮಹಾರಾಷ್ಟ್ರದ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಕೆಲವೊಂದು ಹುದ್ದೆಗಳಿಗೆ ಶಾಸಕರು, ಮೇಲ್ಮನೆ ಸದಸ್ಯರನ್ನು ನೇಮಕಗೊಳಿಸಿದೆ. ಲೋಕಸಭೆ ಚುನಾವಣೆ ಬಳಿಕ ರಾಹುಲ್‌ ಅನುಪಸ್ಥಿತಿಯಲ್ಲಿ ಕೈಗೊಂಡ ಮೊದಲ ನಿರ್ಧಾರ ಇದಾಗಿದೆ.

ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾವದ ಅನುಸಾರ ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ತಿಳಿಸಿದ್ದಾರೆ.