ಸರ್ಜಿಕಲ್ ದಾಳಿಯ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು ಭಾರತೀಯ ಸೇನೆಯು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲವೆಂದು ಅರೂಪ್ ಸ್ಪಷ್ಟನೆ ನೀಡಿದ್ದಾರೆ.
ಹಿಂಡೋನ್, ಉ,ಪ್ರ (ಅ.08): ಭಾರತೀಯ ಸೇನೆಯು ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದ್ದು, ಸರ್ಜಿಕಲ್ ದಾಳಿಯ ಬಗ್ಗೆ ಸೇನೆಯ ಜೊತೆ ಸಾಕಷ್ಟು ಬಾರಿ ಮಾತುಕತೆ ನಡೆಸಲಾಗಿದೆ ಎಂದು ವಾಯುಸೇನಾ ಮುಖ್ಯಸ್ಥ ಅರೂಪ್ ರಾಹಾ ಹೇಳಿದ್ದಾರೆ.
ಸರ್ಜಿಕಲ್ ದಾಳಿಯ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು ಭಾರತೀಯ ಸೇನೆಯು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲವೆಂದು ಅರೂಪ್ ಸ್ಪಷ್ಟನೆ ನೀಡಿದ್ದಾರೆ.
ದೇಶಾದ್ಯಂತ ಸರ್ಜಿಕಲ್ ದಾಳಿಯ ಬಗ್ಗೆ ಚರ್ಚೆಯಾಗಿದೆ. ಸಮಾಜದ ಪ್ರತಿ ವರ್ಗದವರೂ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ದೇಶದ ನಿರೀಕ್ಷೆಯನ್ನು ಸೇನೆ ನಿಜವಾಗಿಸುತ್ತದೆ ಆದರೆ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಕಾರ್ಯರೂಪಕ್ಕಿಳಿಸುತ್ತೇವೆ ಎಂದು ಹಿಂಡೋನ್ ವಾಯುನೆಲೆಯಲ್ಲಿ 84 ನೇ ವಾಯುಸೇನಾ ದಿನದ ಆಚರಣೆ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಅರೂಪ್ ಈ ಮಾತನ್ನು ಹೇಳಿದ್ದಾರೆ.