ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನು ಮೂರು ದಿನ ಮಳೆ ಮುಂದುವರೆಯಲಿದೆ. ಗುರುವಾರ ರಾಜ್ಯದ ಒಳನಾಡು ಜಿಲ್ಲೆಗಳ ಕೆಲವಡೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆದರೆ, ಕೇರಳ ತೀರಕ್ಕೆ ಮುಂಗಾರು ಪ್ರವೇಶವಾಗಿ ಆರು ದಿನ ಕಳೆದಿದೆ. ಆದರೂ ಭಾರತೀಯ ಹವಾಮಾನ ಇಲಾಖೆ ಮಂಗಾರು ಕರ್ನಾಟಕ ಪ್ರವೇಶ ಮಾಡಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟಮಾಹಿತಿಯನ್ನು ನೀಡುತ್ತಿಲ್ಲ. ವಾಯು ಚಂಡಮಾರುತದ ಪರಿಣಾಮವಾಗಿ ಮುಂಗಾರು ಪ್ರವೇಶದ ಕುರಿತು ಸ್ಪಷ್ಟತೆ ಲಭ್ಯವಾಗುತ್ತಿಲ್ಲ ಎಂದು ಹೇಳುತ್ತಿದೆ.

ಮಳೆಗಾಲದಲ್ಲಿ ಗ್ಯಾಜೆಟ್ ಸುರಕ್ಷತೆಗೆ ಹೀಗ್ ಮಾಡಿ

ಅರಬ್ಬಿ ಸಮುದ್ರದಲ್ಲಿ ರೂಪಗೊಂಡಿದ್ದ ವಾಯು ಚಂಡಮಾರುತದ ಪ್ರಭಾವದಿಂದ ಕಳೆದ ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ ಸುರಿದಿತ್ತು. ಇದೀಗ ಚಂಡಮಾರುತ ಗುಜರಾತ್‌ ಕರಾವಳಿ ತೀರವನ್ನು ತಲುಪಿದ್ದು, ರಾಜ್ಯದಲ್ಲಿ ಪ್ರಭಾವ ಕಡಿಮೆಯಾಗಿದೆ. ಹೀಗಾಗಿ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಗಾಳಿಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೂ ಮುಂದಿನ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಕೆಲ ಭಾಗದಲ್ಲಿ ಮಾತ್ರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ತುಂತುರು ಮಳೆ ಹಾಗೂ ಜೋರು ಗಾಳಿ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

ಮಳೆಯಲ್ಲಿ ಹೇಗಿ ನೋಡಿಕೊಳ್ಳಬೇಕು ಆರೋಗ್ಯ?