ಬೆಂಗಳೂರು ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.
ಬೆಂಗಳೂರು(ಜೂ.27): ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
