ಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಡಿನೋಟಿಫಿಕೇಷನ್ ತನಿಖೆ ನಡೆಯುತ್ತಿರುವಾಗಲೇ ಮತ್ತೊಬ್ಬ ಮಾಜಿ ಸಿಎಂಗೆ ಡಿನೋಟಿಫಿಕೇಷನ್ ಉರುಳು ಸುತ್ತಿಕೊಳ್ತಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ಧದ ಶಿವರಾಮಕಾರಂತ ಬಡಾವಣೆಯ ಡಿನೋಟಿಫೈ ಕೇಸನ್ನು 2012ರಲ್ಲೇ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ ವಿ ಸದಾನಂದಗೌಡ ಅವರು ತನಿಖೆಗೆ ಆದೇಶಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಳ್ಳಲು ಸಹ ಸಿದ್ದರಾಗಿದ್ದರು. ಆದರೆ ಸಿಎಂ ಸದಾನಂದಗೌಡ ಎಫ್ ಐ ಆರ್ ದಾಖಲು ಮಾಡದಂತೆ ಸೂಚಿಸಿದ್ದರು ಎನ್ನಲಾಗಿದೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಡಿನೋಟಿಫಿಕೇಷನ್ ತನಿಖೆ ನಡೆಯುತ್ತಿರುವಾಗಲೇ ಮತ್ತೊಬ್ಬ ಮಾಜಿ ಸಿಎಂಗೆ ಡಿನೋಟಿಫಿಕೇಷನ್ ಉರುಳು ಸುತ್ತಿಕೊಳ್ತಿದೆ.

ಮಾಜಿ ಸಿಎಂ ಬಿಎಸ್ ವೈ ವಿರುದ್ಧದ ಶಿವರಾಮಕಾರಂತ ಬಡಾವಣೆಯ ಡಿನೋಟಿಫೈ ಕೇಸನ್ನು 2012ರಲ್ಲೇ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ ವಿ ಸದಾನಂದಗೌಡ ಅವರು ತನಿಖೆಗೆ ಆದೇಶಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಳ್ಳಲು ಸಹ ಸಿದ್ದರಾಗಿದ್ದರು. ಆದರೆ ಸಿಎಂ ಸದಾನಂದಗೌಡ ಎಫ್ ಐ ಆರ್ ದಾಖಲು ಮಾಡದಂತೆ ಸೂಚಿಸಿದ್ದರು ಎನ್ನಲಾಗಿದೆ.

ಸದಾನಂದಗೌಡರ ಅವತ್ತಿನ ಈ ನಿರ್ಧಾರ ಪ್ರಸ್ತುತ ಚರ್ಚೆಗೆ ಗ್ರಾಸವಾಗಿದೆ.. ಪ್ರಕರಣದಲ್ಲಿ ಬಿಎಸ್ ವೈ ವಿರುದ್ಧದ ಎಲ್ಲಾ ಆರೋಪಗಳು ಸಾಬಿತಾಗಿದ್ದರೂ ಸಹ ಸದಾನಂದ ಗೌಡ ಎಫ್ ಐ ಆರ್ ದಾಖಲಿಸದಂತೆ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿದ್ದರು ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ಎಸಿಬಿ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಕಲೆ ಹಾಕ್ತಿದ್ದಾರೆ.

ಈ ಕುರಿತು ಕಾಂಗ್ರೆಸ್ ನಾಯಕ ಉಗ್ರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಕೂಡಾ ಬಹಿರಂಗಪಡಿಸಿದ್ದಾ

ಈ ಪ್ರಕರಣದಲ್ಲಿ ಬಿಎಸ್ ವೈ ಗೆ ಮಾಜಿ ಸಿಎಂ ಸದಾನಂದಗೌಡ ಅವರು ಬೆನ್ನಿಗೆ ನಿಂತಿರುವುದು ಸ್ಪಷ್ಟವಾಗಿದೆ. ಈ ಎಲ್ಲಾ ದಾಖಲೆಗಳನ್ನು ತರೆಸಿಕೊಂಡು ಸದಾನಂದಗೌಡ ಅವರನ್ನು ಸಹ ವಿಚಾರಣೆ ಗೆ ಕರೆಯುವ ಸಾಧ್ಯತೆಗಳಿವೆ.