ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಚಿವರಿಗೆ ಬೆಂಗಳೂರಿನಲ್ಲಿಂದು ಔತಣಕೂಟ ಆಯೋಜನೆ ಮಾಡಿದ್ದಾರೆ. ಕಾಂಗ್ರೆಸ್’ನ ಎಲ್ಲಾ ಸಚಿವರು ಮತ್ತು ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ರಾತ್ರಿ 8 ಗಂಟೆಗೆ ಸಿದ್ದರಾಮಯ್ಯ ಆಯೋಜಿಸಿರುವ ಔತಣಕೂಟ ನಡೆಯಲಿದೆ.
ಬೆಂಗಳೂರು (ಆ. 01): ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಚಿವರಿಗೆ ಬೆಂಗಳೂರಿನಲ್ಲಿಂದು ಔತಣಕೂಟ ಆಯೋಜನೆ ಮಾಡಿದ್ದಾರೆ.
ಕಾಂಗ್ರೆಸ್’ನ ಎಲ್ಲಾ ಸಚಿವರು ಮತ್ತು ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ರಾತ್ರಿ 8 ಗಂಟೆಗೆ ಸಿದ್ದರಾಮಯ್ಯ ಆಯೋಜಿಸಿರುವ ಔತಣಕೂಟ ನಡೆಯಲಿದೆ. ಅಧಿವೇಶನದ ಬಳಿಕ ಮೊದಲ ಬಾರಿಗೆ ಸಚಿವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ. ಸಿದ್ಧರಾಮಯ್ಯ ಆಯೋಜಿಸಿರುವ ಔತಣಕೂಟದ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ.
ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣಾ ಸಿದ್ಧತೆಯ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜೆಡಿಎಸ್ ಜೊತೆಗಿನ ಮೈತ್ರಿಯಲ್ಲಿ ಆಗುತ್ತಿರುವ ತೊಂದರೆಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಪಕ್ಷದ ಪ್ರಮುಖ ನಾಯಕರು ಸಹ ಇಂದಿನ ಔತಣಕೂಟದಲ್ಲಿ ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ.
ಪಕ್ಷ ಸಂಘಟನೆ ಕುರಿತು ಚರ್ಚಿಸಲು ಸಿದ್ಧರಾಮಯ್ಯ ಆಯೋಜಿಸಿರುವ ಔತಣಕೂಟ ರಾಜಕೀಯ ಚರ್ಚೆಗೆ ವೇದಿಕೆಯಾಗಲಿದೆ.
