Asianet Suvarna News Asianet Suvarna News

ಕೋಮುವಾದದ ಕನ್ನಡಕ ಕಳಚಿಟ್ಟು ಟಿಪ್ಪುವನ್ನು ನೋಡಿ: ಸಿದ್ದರಾಮಯ್ಯ

ಟಿಪ್ಪು ವಿರೋಧಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ತಿವಿದಿದ್ದಾರೆ. ಹಾಗಾದ್ರೆ ಸಿದ್ದು ಹೇಗೆಲ್ಲ ಟ್ವೀಟ್ ಮಾಡಿದ್ದಾರೆ ಅನ್ನೋದನ್ನ ನೋಡಿ.

Former CM Siddaramaiah slams BJP via a tweet about Tipu Jayanti
Author
Bengaluru, First Published Nov 10, 2018, 2:11 PM IST

ಬೆಂಗಳೂರು, (ನ.9): ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪು ವಿರೋಧಿಗಳಿಗೆ ಟ್ವಿಟರ್​ ಮೂಲಕ ತಿವಿದಿದ್ದಾರೆ.

ಟಿಪ್ಪು ಜಯಂತಿ: ’ಸುಲ್ತಾನ್’ ಆದ ಸಿದ್ದರಾಮಯ್ಯ

ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ ಎಂದು ಬಿಜೆಪಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

‘ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ. ಟಿಪ್ಪು ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನಲ್ಲ.

ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ಧ ಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ, ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ.

ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಸಿಂಧೂರ ಲಕ್ಷ್ಮಣ, ರಾಣಿ ಅಬ್ಬಕ್ಕ ದೇವಿ ಸೇರಿದಂತೆ ಬ್ರಿಟೀಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ?’ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವಟ್ ನಲ್ಲಿ, ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯಾತೀತ ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದೆ.

ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆದ ದ್ರೋಹ ಎಂದು ಟ್ವೀಟ್ ಮಾಡಿದ್ದಾರೆ.

Follow Us:
Download App:
  • android
  • ios